ಸುಬ್ರಹ್ಮಣ್ಯ: ಭಾರೀ ಗಾಳಿ ಮಳೆಗೆ ರಸ್ತೆಗೆ ಉರುಳಿ ಬಿದ್ದ ಮರ ➤ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 22. ಭಾರೀ ಗಾಳಿ ಸಹಿತ ಮಳೆ ಸುರಿದ ಪರಿಣಾಮ ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿ ಪಿ ಸಿ ಅರ್ ಐ ಬಳಿ ಹೆದ್ದಾರಿಗೆ ಅಡ್ಡವಾಗಿ ಮರವೊಂದು ಉರುಳಿ ಬಿದ್ದು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಯಿತು.

ಈ ಕುರಿತು ಸ್ಥಳಿಯ ಮುಂದಾಳು ರಮೇಶ್ ವಾಲ್ತಾಜೆ ಎಂಬವರು ಸಂಬಂದಪಟ್ಟವರಿಗೆ ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿದ ಮೆಸ್ಕಾಂ, ಅರಣ್ಯ ಹಾಗೂ ಪೊಲೀಸ್ ಇಲಾಖಾ ಸಿಬ್ಬಂದಿಗಳು ಸ್ಥಳಿಯರ ಸಹಕಾರದೊಂದಿಗೆ ತುರ್ತು ಕಾರ್ಯಚರಣೆ ನಡೆಸಿ ಮರ ತೆರವುಗೊಳಿದರು. ಘಟನೆಯಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.

Scroll to Top