ಉಳ್ಳಾಲ: ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ ➤ ಮಹಿಳೆ ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 22. ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಜಾಗದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ದೇವಸ್ಥಾನದಿಂದ ಹೊರಬರುತ್ತಿದ್ದ ಮಹಿಳೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ತಲಪಾಡಿ ದೇವಿಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ.


ತಲಪಾಡಿಯ ವಿಜಯಾ ಬ್ಯಾಂಕ್ ಬಳಿಯಿರುವ ನದಿಯಿಂದ ಪ್ರತೀನಿತ್ಯವೂ ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿದ್ದು, ಸೋಮವಾರ ಮಧ್ಯಾಹ್ನದ ವೇಳೆಗೆ ಮುಖ್ಯ ರಸ್ತೆ ತಪ್ಪಿಸಿ ತಲಪಾಡಿಯ ಒಳ ರಸ್ತೆಯ ಮೂಲಕ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರ್ ನಿಯಂತ್ರಣ ತಪ್ಪಿ ಖಾಸಗಿ ಜಾಗದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಮಹಿಳೆಯೋರ್ವರು ಅದೃಷ್ಟವಶಾತ್ ಅಲಾಯದಿಂದ ಪಾರಾಗಿದ್ದಾರೆ. ಈ ಕುರಿತು ಸ್ಥಳೀಯರು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಘಟನೆಯ ಕುರಿತು ತಿಳಿದ ಕೂಡಲೇ ಉಳ್ಳಾಲ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು ತನಿಖೆ ಮುಂದುವರಿಸಿದ್ದಾರೆ.

Also Read  ಚೈತ್ರಾಗೆ ರಕ್ಷಣೆ ನೀಡಿರುವುದು ಸುಳ್ಳು ಸುದ್ದಿ- ಸುರಯ್ಯ ಅಂಜುಂ ಸ್ಪಷ್ಟನೆ

error: Content is protected !!
Scroll to Top