? ಉಪ್ಪಿನಂಗಡಿ: ಅರಣ್ಯ ವೀಕ್ಷಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 23. ಅರಣ್ಯ ಇಲಾಖಾ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.


ಆತ್ಮಹತ್ಯೆಗೈದವರನ್ನು ಪುತ್ತೂರು ಉರ್ಲಾಂಡಿ ನಿವಾಸಿ ಜನಾರ್ದನ್ ಎನ್ (36) ಎಂದು ಗುರುತಿಸಲಾಗಿದೆ. ಇವರು ಕಳೆದ ಹತ್ತು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಪ್ರಸ್ತುತ ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾ ವ್ಯಾಪ್ತಿಯಲ್ಲಿ ಅರಣ್ಯ ವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ಕುಡಿತದ ಚಟ ಹೊಂದಿದ್ದು, ಆದಿತ್ಯವಾರದಂದು ರಾತ್ರಿ ಉಪ್ಪಿನಂಗಡಿ ಕೆಂಪಿ ಮಜಲು ಎಂಬಲ್ಲಿನ ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Also Read  ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ➤ ಕೊನೆಗೂ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು..!

error: Content is protected !!
Scroll to Top