ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ➤ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಬಸ್ ಚಾಲಕ, ನಿರ್ವಾಹಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.23. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಬಸ್ ಚಾಲಕ ಮತ್ತು ನಿರ್ವಾಹಕ ಸೇರಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಮಂಗಳವಾರದಂದು ಉಪ್ಪಿನಂಗಡಿಯಲ್ಲಿ ನಡೆದಿದೆ.

ಪೊಲೀಸರ ವಶದಲ್ಲಿರುವ ಯುವಕನನ್ನು ಚಿಕ್ಕಮಗಳೂರು ನಿವಾಸಿ ಮುಹಮ್ಮದ್ ಸೈಫುಲ್ಲಾ ಎಂದು ಗುರುತಿಸಲಾಗಿದೆ. ಆರೋಪಿಯು ಮಂಗಳವಾರ ಬೆಳಗ್ಗೆ ಧರ್ಮಸ್ಥಳದಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ವಿದ್ಯಾರ್ಥಿನಿಯ ಮೈ ಮುಟ್ಟಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿಯು ಬಸ್ ಚಾಲಕ, ನಿರ್ವಾಹಕರಲ್ಲಿ ಈ ವಿಚಾರ ತಿಳಿಸಿದ್ದು, ತಕ್ಷಣವೇ ಬಸ್ಸನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯ ಹತ್ತಿರ ನಿಲ್ಲಿಸಿ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

Also Read  ಅಂತರ್ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಲಯಕ್ಕೆ ಪ್ರಶಸ್ತಿ

 

error: Content is protected !!
Scroll to Top