ನಾಳೆ (ಫೆ.26) ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕಡಬಕ್ಕೆ ➤ ಕಡಬ ತಾಲೂಕು ಪಂಚಾಯತ್ ನೂತನ ಕಟ್ಟಡಕ್ಕೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಕಡಬ, ಫೆ.25. ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪರವರು ನಾಳೆ(ಫೆ.26) ಕಡಬಕ್ಕೆ ಆಗಮಿಸಲಿದ್ದು, ಕಡಬ ತಾಲೂಕು ಪಂಚಾಯತ್ ನ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ತಾಲೂಕು ಪಂಚಾಯತ್ ನ ನೂತನ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಸಾರಿಗೆ ಸಚಿವರಾದ ಎಸ್.ಅಂಗಾರ, ರಾಜ್ಯ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆ ಹಾಗೂ ‌ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳೀನ್ ಕುಮಾರ್ ಕಟೀಲ್, ಕಡಬ ತಾಲೂಕು ಪಂಚಾಯತ್ ಅಧ್ಯಕ್ಷರಾದ ಕುಮಾರಿ ರಾಜೇಶ್ವರಿ ಕನ್ಯಾಮಂಗಲ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಾಲೂಕು ಪಂಚಾಯತ್ ಪ್ರಕಟಣೆ ತಿಳಿಸಿದೆ.

Also Read  ಮಲ್ಪೆ: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

 

 

error: Content is protected !!
Scroll to Top