ಎಸ್ಡಿಪಿಐ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ➤ ಓರ್ವ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ

(ನ್ಯೂಸ್ ಕಡಬ) newskadaba.com ಕೇರಳ, ಫೆ. 25. ಎಸ್ಡಿಪಿಐ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತನೋರ್ವನ ಬರ್ಬರ ಹತ್ಯೆಯಾಗಿರುವ ಘಟನೆ ಕೇರಳದ ಆಳಪ್ಪುಝ ಜಿಲ್ಲೆಯ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ನಡೆದಿದೆ.


ಹತ್ಯೆಯಾದವರನ್ನು ಆರೆಸ್ಸೆಸ್ ಕಾರ್ಯಕರ್ತ ನಂದು ಎಂದು ಗುರುತಿಸಲಾಗಿದೆ. ಆರೆಸ್ಸೆಸ್ ಹಾಗೂ ಎಸ್ಡಿಪಿಐ ಕಾರ್ಯಕರ್ತರ ನಡುವೆ ಈ ಘರ್ಷಣೆ ನಡೆದಿದ್ದು, ಪರಿಣಾಮ ಓರ್ವ ಆರೆಸ್ಸೆಸ್ ಕಾರ್ಯಕರ್ತ ಮೃತಪಟ್ಟಿದ್ದು, ಇನ್ನು ಎಸ್ಡಿಪಿಐ ಹಾಗೂ ಆರೆಸ್ಸೆಸ್ ನ ಇತರ ಕಾರ್ಯಕರ್ತರಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಈ ಹತ್ಯೆಯನ್ನು ಖಂಡಿಸಿರುವ ಕೇರಳ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್, ಈ ಘಟನೆಯ ಹಿಂದೆ ಪಿಎಫ್ ಐ ಕೈವಾಡ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read  ಜಮ್ಮು ಕಾಶ್ಮೀರ: ಯೋಧರೋರ್ವರು ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿ ಆತ್ಮಹತ್ಯೆ

error: Content is protected !!
Scroll to Top