? ಕಚೇರಿಯಲ್ಲೇ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ತಹಶೀಲ್ದಾರ್ ಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಫೆ. 25.‌ ಆಸ್ತಿ ಪತ್ರಕ್ಕೆ ಸಂಬಂಧಿಸಿ ತಹಶೀಲ್ದಾರ್ ಓರ್ವರಿಗೆ ಸೀಮೆ ಎಣ್ಣೆ ಸುರಿದು ತಂದೆ-ಮಗ ಬೆಂಕಿಹಚ್ಚಲು ಪ್ರಯತ್ನಿಸಿರುವ ಘಟನೆ ಜಮಖಂಡಿಯಲ್ಲಿ ನಡೆದಿದೆ.

ಆರೋಪಿಗಳನ್ನು ಲಕ್ಷ್ಮಣ ಹಾಗೂ ಅವರ ಪುತ್ರ ಬಸವರಾಜ ಎಂದು ಗುರುತಿಸಲಾಗಿದೆ. ಗ್ರೇಡ್ 2 ತಹಶೀಲ್ದಾರ್ ನಾಗಪ್ಪ ಬಿರಡಿ ಎಂಬವರ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಲು ಪ್ರಯತ್ನಿಸಿದ್ದು, ತಕ್ಷಣವೇ ತಹಶೀಲ್ದಾರ್ ಕಚೇರಿಯಿಂದ ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.

ಆರೋಪಿ ಲಕ್ಷ್ಮಣ ಎಂಬವರು 2016ರಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದ ಸರ್ವೆ ನಂ.190/2ರಲ್ಲಿ ಇರುವಂತಹ 4 ಎಕರೆ 16 ಗುಂಟೆ ಜಾಗವನ್ನು ತಮ್ಮ ಹೆಸರಿಗೆ ನೋಂದಾಯಿಸಿ ಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಶೀಲಿಸಿದ ತಹಶೀಲ್ದಾರ್ ನಾಗಪ್ಪ ಬಿರಡಿ ಇದು ನನ್ನ ವ್ಯಾಪ್ತಿಗೆ ಬರೋದಿಲ್ಲ ಎಂದು ಅರ್ಜಿಯನ್ನು ವಜಾ ಮಾಡಿದ್ದರು. ಇದರಿಂದ ಕೋಪಗೊಂಡು ಈ ಕೃತ್ಯಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

Also Read  ಹಣಕಾಸಿನ ವ್ಯವಹಾರ ನಿಮ್ಮಂತೆಯೇ ಆಗಬೇಕು ಸಾಲದ ಸಮಸ್ಯೆಗಳು ನಿವಾರಣೆಯಾಗಬೇಕು ಕಷ್ಟಗಳು ಪರಿಹಾರ ಆಗಬೇಕೆಂದರೆ ಈ ನಿಯಮವನ್ನು ಪಾಲಿಸಿ

error: Content is protected !!
Scroll to Top