ವಿಟ್ಲ: ಬೈಕ್-ಲಾರಿ ನಡುವೆ ಢಿಕ್ಕಿ ➤ ಮಗ ಮೃತ್ಯು, ತಂದೆ ಗಂಭೀರ



(ನ್ಯೂಸ್ ಕಡಬ) newskadaba.com ವಿಟ್ಲ, ಫೆ.25. ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ – ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಎಂಬಲ್ಲಿ ಗುರುವಾರದಂದು ಸಂಭವಿಸಿದೆ.





ಮೃತ ಸವಾರನನ್ನು ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ನಿವಾಸಿ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಇಸ್ಮಾಯಿಲ್ ಹಾಗೂ ಆತನ ತಂದೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಂಬಳಬೆಟ್ಟು ಸಮೀಪದ ಬದನಾಜೆ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ಬೈಕ್ ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಇಸ್ಮಾಯಿಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿರುವ ಆತನ ತಂದೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

error: Content is protected !!
Scroll to Top