ಆರೆಸ್ಸೆಸ್ ಹಾಗೂ ಎಸ್ಡಿಪಿಐ ನಡುವೆ ಘರ್ಷಣೆ ➤ 8 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಕೇರಳ, ಫೆ. 25.‌ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐನ 8 ಮಂದಿ ಕಾರ್ಯಕರ್ತರನ್ನು ಬಂಧಿಸಿದ ಘಟನೆ ನಡೆದಿದೆ.

ಬುಧವಾರ ರಾತ್ರಿ ಚೆರ್ತಲಾ ಸಮೀಪದ ನಾಗಂಕುಲಂಗರದಲ್ಲಿ ನಡೆದ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತ ನಂದು(23) ಎಂಬಾತ ಮೃತಪಟ್ಟಿದ್ದು, ಅಲ್ಲದೇ ಎಸ್ಡಿಪಿಐ ಹಾಗೂ ಆರೆಸ್ಸೆಸ್ ನ ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಲಪ್ಪುಳ ಹಾಗೂ ಎರ್ನಾಕುಲಂನ ವಿವಿಧ ಆಸ್ಪತ್ರೆಗಳಲ್ಲಿ ಸೇರಿಸಲಾಗಿದೆ. ಆರ್ ಎಸ್ ಎಸ್ ಸಂಘಟನೆಗೆ ಸೇರಿದ ಓರ್ವ ಕಾರ್ಯಕರ್ತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ

error: Content is protected !!
Scroll to Top