ಲಾರಿ ಹಾಗೂ ಅಶೋಕ್ ಲೈಲ್ಯಾಂಡ್ ದೋಸ್ತ್ ನಡುವೆ ಢಿಕ್ಕಿ ➤ ದೋಸ್ತ್ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.25. ಲಾರಿ ಹಾಗೂ ಲೇಲ್ಯಾಂಡ್ ದೋಸ್ತ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಚಾಲಕ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಕೊಣಾಲು ಎಂಬಲ್ಲಿ ಗುರುವಾರದಂದು ನಡೆದಿದೆ.

ಮೃತರನ್ನು ಲೈಲ್ಯಾಂಡ್ ದೋಸ್ತ್ ವಾಹನ ಚಾಲಕ ಹಾಸನ ಜಿಲ್ಲೆಯ ಆಲೂರು ನಿವಾಸಿ ಚೇತನ್ ಎಂ.ವಿ.(22) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಹಾಗೂ ಹಾಸನದಿಂದ ಉಪ್ಪಿನಂಗಡಿಗೆ ಬರುತ್ತಿದ್ದ ದೋಸ್ತ್ ನಡುವೆ ಈ ದುರ್ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಚೇತನ್ ರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕಡಬ: ಕಸ್ತೂರಿ ರಂಗನ್‌ ವರದಿ ಅನುಷ್ಠಾನ ವಿರೋಧಿಸಿ ವಾಹನ ಜಾಥಾ

 

 

error: Content is protected !!