ಕಡಬ: ತಾಲೂಕು ಪಂಚಾಯತ್ ನೂತನ ಕಟ್ಟಡದ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 26. ಜನರ ಸಮಸ್ಯೆಗೆ ನೇರವಾಗಿ ಸ್ಪಂದಿಸುವ ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ಉಳಿಸುವುದು ಅನಿವಾರ್ಯ. ಎರಡನೇ ಸ್ತರದ ನಾಯಕರನ್ನು ಸೃಷ್ಠಿಸುವುದರಲ್ಲಿ ತಾಲೂಕು ಪಂಚಾಯತ್ ವ್ಯವಸ್ಥೆ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.‌ ಅವರು ಕಡಬ ತಾಲೂಕು ಪಂಚಾಯತ್ ನೂತನ ಕಟ್ಟಡದ ಶಿಲಾನ್ಯಾಸ‌ ಕಾರ್ಯಕ್ರಮದಲ್ಲಿ ನೂತನ ಕಟ್ಟಡದ ಶಿಲಾಫಲಕ ಅನಾವರಣ ಮಾಡಿ ಮಾತನಾಡಿದರು.

ಶಿಲಾನ್ಯಾಸ ನೆರ‌ವೇರಿಸಿ ಮಾತನಾಡಿದ ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ, ನೂತನ ಕಡಬ ತಾಲೂಕು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳ್ಳಲು ಎಲ್ಲಾ ಇಲಾಖೆಗಳು ಕಾರ್ಯಾಚರಿಸಬೇಕು. ಕಡಬದಲ್ಲಿ ಎಲ್ಲಾ ಇಲಾಖೆಗಳ ಅನುಷ್ಠಾನಕ್ಕೆ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.

Also Read   ರಾಜ್ಯ ಯುವ ಬರಹಗಾರರ ಒಕ್ಕೂಟ: ಪತ್ರಕರ್ತ ಶಂಶೀರ್  ನೇಮಕ

ಸಮಾರಂಭದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನೆರವೇರಿಸಿದರು. ಈ‌ಸಂದರ್ಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಉಪಾಧ್ಯಕ್ಷೆ ಜಯಂತಿ ಆರ್ ಗೌಡ, ಜಿಲ್ಲಾ ಪಂಚಾಯತ್ ಸದಸ್ಯರಾದ ಪಿ.ಪಿ.ವರ್ಗೀಸ್, ಹರೀಶ್ ಕಂಜಿಪಿಲಿ, ಸರ್ವೋತ್ತಮ ಗೌಡ, ಆಶಾ ತಿಮ್ಮಪ್ಪ, ಪ್ರಮೀಳಾ ಜನಾರ್ಧನ ಮೊದಲಾದವರು ಉಪಸ್ಥಿತರಿದ್ದರು.

error: Content is protected !!
Scroll to Top