ಆರ್ ಬಿ ಐ ನಿಂದ ಹಣ ತುಂಬಿಸಿಕೊಂಡು ಹೋಗುತ್ತಿದ್ದ ಕಂಟೇನರ್ ಪಲ್ಟಿ



(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 26. ಆರ್‌ಬಿಐ ನಿಂದ ಹಣ ತುಂಬಿಸಿಕೊಂಡು ಹೋಗುತ್ತಿದ್ದ ಕಂಟೇನರ್ ಲಾರಿಯೊಂದು ಪಲ್ಟಿಯಾಗಿರುವ ಘಟನೆ ರಾಮನಗರದ ಬಿಡದಿ ಬಳಿಯ ಕಲ್ಲುಗೋಪಹಳ್ಳಿ ಬಳಿ ನಡೆದಿದೆ.





ಮೈಸೂರು ಆರ್.ಬಿ.ಐ ನಿಂದ ಬೆಂಗಳೂರಿಗೆ ಹಣ ತುಂಬಿಸಿಕೊಂಡು ಹೋಗುತ್ತಿದ್ದ ಕಂಟೇನರ್ ಲಾರಿಯು ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗೋಪಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಕಾರಣ ರಸ್ತೆಯಲ್ಲಿ ಅಲ್ಲಲ್ಲಿ ತಿರುವುಗಳನ್ನು ಮಾಡಿದ್ದು, ಈ ಕಾರಣದಿಂದಾಗಿ ಕಂಟೇನರ್‌ ಚಾಲಕನ ನಿಯಂತ್ರಣಕ್ಕೆ ಸಿಗದೇ ಪಲ್ಟಿಯಾಗಿದೆ ಎನ್ನಲಾಗಿದೆ.






error: Content is protected !!
Scroll to Top