ಪಂಜ: ಶ್ರೀ ಆದಿ ಬೈದರುಗಳ ನೇಮೋತ್ಸವ

(ನ್ಯೂಸ್ ಕಡಬ) newskadaba.com ಪಂಜ, ಫೆ. 27. ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ಗರಡಿಯಲ್ಲಿ ಫೆ.26ರಂದು ರಾತ್ರಿ ಶ್ರೀ ಆದಿ ಬೈದರುಗಳ ನೇಮೋತ್ಸವವು ನಡೆಯಿತು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿ ಬೈಲುಗುತ್ತು, ಮಾಜಿ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ನಾರಾಯಣ ಗೌಡ ಕೋರ್ಜೆ, ದಿನೇಶ್ ಗರಡಿ, ಶಂಕರ್ ಕುಮಾರ್, ಲಕ್ಷ್ಮಣ ಗೌಡ ಆಕ್ರಿಕಟ್ಟೆ, ರಾಮಚಂದ್ರ ಭಟ್, ಶ್ರೀಮತಿ ಸೌಮ್ಯ ಪಿ ಆರ್, ಶ್ರೀಮತಿ ರೋಹಿಣಿ ಆರ್ನೋಜಿ ಹಾಗೂ ಸೀಮೆಯ ನೂರಾರು ಭಕ್ತರು ಪಾಲ್ಗೊಂಡಿದ್ದರು.

Also Read  ಸಕಲೇಶಪುರ: ಭೂಕುಸಿತ ಹಿನ್ನೆಲೆ- 10 ರೈಲುಗಳ ಸಂಚಾರ ರದ್ದು..!!

error: Content is protected !!
Scroll to Top