ಮಾರ್ಚ್ 31ರ ವರೆಗೆ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 27. ಅಂತರರಾಷ್ಟ್ರೀಯ ಪ್ರಯಾಣಿಕರ ವಿಮಾನ ಸಂಚಾರ ನಿರ್ಬಂಧವನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಪರಿಷ್ಕೃತ ಸುತ್ತೋಲೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅಂತರಾಷ್ಟ್ರೀಯ ವಾಣಿಜ್ಯಕ್ಕೆ ಸಂಬಂಧಿಸಿದಂತೆ ಭಾರತದಿಂದ ತೆರಳುವ ಮತ್ತು ಆಗಮಿಸುವ ಅಂತರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನ ಸೇವೆಯನ್ನು 2021ರ ಮಾರ್ಚ್ 31ವರೆಗೆ ನಿಷೇಧಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಆದರೆ ನಿಗದಿತ ಮಾರ್ಗಗಳಲ್ಲಿ ನಿಗದಿತ ಅಂತರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಜೊತೆಗೆ ಅಂತರಾಷ್ಟ್ರೀಯ ಸರಕು ಸಾಗಾಟದ ವಿಮಾನಗಳಿಗೆ ನಿರ್ಬಂಧಗಳು ಅನ್ವಯಿಸುವುದಿಲ್ಲ ಎಂದು ಡಿಜಿಸಿಎ ತಿಳಿಸಿದೆ.

Also Read  ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಇನ್ನೊಂದು ತಿರುವು ➤  ಶ್ರೀಜಾನ್‌ ಡ್ರಗ್ಸ್‌ ವ್ಯಸನಿಯೆಂದು ಆರೋಪಿಸಿದ ತುನಿಷಾ ತಾಯಿ

error: Content is protected !!
Scroll to Top