ಅಮಾಯಕ ಜೀವವನ್ನು ಬಲಿಪಡೆದ ಹೊಸ್ಮಠದ ಅವೈಜ್ಞಾನಿಕ ಹಂಪ್ ➤ ಬೈಕ್ ಸ್ಕಿಡ್ ಆಗಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ.28. ಇಲ್ಲಿನ ಹೊಸ್ಮಠ ಸೇತುವೆಯ ಬಳಿ ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ಹಂಪ್ ನಿಂದಾಗ ಅಮಾಯಕ ಮಹಿಳೆಯೋರ್ವರು ಬಲಿಯಾಗಿರುವ ಘಟನೆ ಭಾನುವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಮೃತ ಮಹಿಳೆಯನ್ನು ವೇಣೂರಿನ ಬಜಾಲು ಸಮೀಪದ ವಿರಂದಲೆ ನಿವಾಸಿ ವೆಂಕಪ್ಪ ಸಾಲ್ಯಾನ್ ಎಂಬವರ ಪತ್ನಿ ಸುಂದರಿ(65) ಎಂದು ಗುರುತಿಸಲಾಗಿದೆ. ಮೃತ‌ ಮಹಿಳೆಯು ತನ್ನ ಮೊಮ್ಮಗನೊಂದಿಗೆ ಭಾನುವಾರ ಬೆಳಗಿನ ಜಾವ ವೇಣೂರಿನಿಂದ ಕಡಬಕ್ಕೆಂದು ಹೊರಟಿದ್ದು, ಬೆಳಿಗ್ಗೆ 6.30ರ ಸುಮಾರಿಗೆ ಮಂಜು ಆವರಿಸಿದ್ದರಿಂದ ಹಂಪ್ ಗೋಚರಿಸದೆ ಬೈಕ್ ಸ್ಕಿಡ್ ಆಗಿದ್ದು, ರಸ್ತೆಗೆಸೆಯಲ್ಪಟ್ಟ ಸುಂದರಿಯವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.

Also Read  ಕಡಲ ತೀರದ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ- ಡಾ|| ಚೂಂತಾರು ಪಣಂಬೂರು ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ

 

 

error: Content is protected !!
Scroll to Top