ನಕಲಿ ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಹೊಂದಿರುವವರ ವಿರುದ್ದ ಕಾನೂನು ಕ್ರಮ ➤ ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮೀ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 28. ಬಿಪಿಎಲ್ ಪಡಿತರ ಚೀಟಿ‌ ಹೊಂದಿದ್ದ ಸಂದರ್ಭದಲ್ಲಿ ಬಡತನ ರೇಖೆಗಿಂತ ಕೆಳಗಿದ್ದು, ಪ್ರಸ್ತುತ ಆರ್ಥಿಕವಾಗಿ ಮುಂದುವರಿದಿರುವವರು ಹಾಗೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದಿರುವವರು ತಮ್ಮ ಪಡಿತರ ಚೀಟಿಯನ್ನು ಇಲಾಖೆಗೆ ಹಿಂತಿರುಗಿಸಿ ಎಪಿಎಲ್ ಪಡಿತರ ಚೀಟಿ ಪಡೆಯದೇ ಇರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮೀ ತಿಳಿಸಿದ್ದಾರೆ.

ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು (ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ಮೇಲ್ಪಟ್ಟವರು, ನಾಲ್ಕು ಚಕ್ರದ ವಾಹನ ಸ್ವಂತಕ್ಕಾಗಿ ಬಳಸುವವರು, ಸರಕಾರಿ/ ಅರೆ ಸರಕಾರಿ/ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಹೊಂದಿರುವವರು, ನಗರ ಪ್ರದೇಶದಲ್ಲಿ 1,000 ಚದರ ಅಡಿ ವಿಸ್ತೀರ್ಣ ಅಥವಾ ಹೆಚ್ಚಿನ ವಿಸ್ತೀರ್ಣದ ವಾಸದ ಮನೆ ಹೊಂದಿರುವ ಕುಟುಂಬಗಳು) ಕೂಡಲೇ ತಮ್ಮ ಬಿಪಿಎಲ್/ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿಗಳನ್ನು ಆಹಾರ ಇಲಾಖೆಗೆ ಹಾಜರುಪಡಿಸಬೇಕು. ಮರಣ ಹೊಂದಿದ ಸದಸ್ಯರ ಹೆಸರನ್ನು ಪಡಿತರ ಚೀಟಿಯಿಂದ ಕೂಡಲೇ ತೆಗೆದು ದಾಖಲೆಯನ್ನು ಇಲಾಖೆಗೆ ಹಾಜರುಪಡಿಸಲು ಮಾ.15 ರವರೆಗೆ ಕೊನೆಯ ಅವಕಾಶ ನೀಡಲಾಗಿದೆ ಎಂದು ತಾಲೂಕು ತಹಶೀಲ್ದಾರ್ ಪ್ರಕಟಣೆ ತಿಳಿಸಿದೆ.

Also Read  ಒಮಿಕ್ರಾನ್ ಆತಂಕ- ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ➤ ಸಿಎಂ ಬೊಮ್ಮಾಯಿ

error: Content is protected !!
Scroll to Top