ಕೋಟ: ಕಾರು ಹಾಗೂ ಬೈಕ್ ಢಿಕ್ಕಿ ➤ ಬೈಕ್ ಸವಾರ ಮೃತ್ಯು



(ನ್ಯೂಸ್ ಕಡಬ) newskadaba.com ಕೋಟ, ಫೆ. 28. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ಸಾಸ್ತಾನದ ಗುಂಡ್ಮಿ ಅಂಬಾಗಿಲು ಎಂಬಲ್ಲಿ ನಡೆದಿದೆ.





ಮೃತರನ್ನು ಕೋಟ ಬನ್ನಾಡಿಯ ಸುಭಾಷ್ ಅಮೀನ್ (45) ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಸಿವಿಲ್ ಕಾಂಟ್ರಾಕ್ಟರ್ ಆಗಿದ್ದು, ಕೆಲಸಕ್ಕೆಂದು ಬನ್ನಾಡಿಯಿಂದ ಉಡುಪಿ ಕಡೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಾರು ಚಾಲಕ ಕುಂದಾಪುರದ ಚರ್ಚ್ ನ ಫಾದರ್ ಆಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಪತ್ನಿ, ಮಗು ಹಾಗೂ ತಾಯಿಯನ್ನು ಅಗಲಿದ್ದಾರೆ.






error: Content is protected !!
Scroll to Top