ಕೊಂಬಾರು: ಮರಕ್ಕೆ ಢಿಕ್ಕಿ ಹೊಡೆದ ಕಾರು ► ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಅ.21. ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಎಂಬಲ್ಲಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು, ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಬೆಂಗಳೂರು ಸುಂಕದಕಟ್ಟೆ ನಿವಾಸಿಗಳಿದ್ದ ತಂಡ ಧರ್ಮಸ್ಥಳ, ಸೌತಡ್ಕ ದೇವರ ದರ್ಶನ ಮುಗಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದುದರಿಂದ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

Scroll to Top