? ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ



(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 01. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.






ಆತ್ಮಹತ್ಯೆಗೈದವರನ್ನು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಜಯಂತ್ ರೆಡ್ಡಿ ಎಂದು ಗುರುತಿಸಲಾಗಿದೆ. ಈತ ಎರಡನೇ ವರ್ಷದ ಇಂಜಿನಿಯರಿಂಗ್‌ ಮೂರನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದ ಎನ್ನಲಾಗಿದೆ. ವಿದ್ಯಾರ್ಥಿ ಆತ್ಮಹತ್ಯೆ ವಿಚಾರವನ್ನು ಕಾಲೇಜು ಆಡಳಿತ ಮಂಡಳಿ ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ವಿವಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top