(ನ್ಯೂಸ್ ಕಡಬ) newskadaba.com. ಮಂಗಳೂರು, ಮಾ. 02. ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ವತಿಯಿಂದ ವೈದ್ಯಕೀಯ ಮತ್ತು ಸ್ನಾತಕೋತ್ತರ ಪರೀಕ್ಷಾ ಪ್ರವೇಶ ಶುಲ್ಕ ಹೆಚ್ಚಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ವಿದ್ಯಾರ್ಥಿಗಳ ಸಂಕಷ್ಟವನ್ನು ಹೇಳಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ಇನಾಯತ್ ಮಂಗಳೂರು, ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶರ್ಫುದ್ದೀನ್ ಮತ್ತು ಝಾಹಿರ್ ಉಪಸ್ಥಿತರಿದ್ದರು.