ಮಂಗಳೂರು: ಮಾ. 07ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 02. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ಇದರ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವು ಮಾರ್ಚ್‌ 7ರಂದು ರವಿವಾರದಂದು ನಗರದ ನೆಹರೂ ಮೈದಾನದ ಬಳಿಯ ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.


ಕ್ರೀಡಾಕೂಟದಲ್ಲಿ 100 ಮೀ. ಓಟ, 200 ಮೀ.ಓಟ, ಬಾಲ್ ಪಾಸಿಂಗ್, ಸಂಗೀತ ಕುರ್ಚಿ, ಮೂರುಕಾಲಿನ ಓಟ, ಸ್ಲೋ ಬೈಕ್‍ ರೇಸ್, ಬಾಳೆ ಹಣ್ಣು ತಿನ್ನುವ ಸ್ಪರ್ಧೆ, ಕ್ರಿಕೆಟ್ ಇನ್ನಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಕ್ರಿಕೆಟ್ ತಂಡಗಳು ಮಾರ್ಚ್ 5ರೊಳಗೆ ಮಂಗಳೂರು ಪ್ರೆಸ್‌ ಕ್ಲಬ್ ನಲ್ಲಿ ಹೆಸರು ನೋಂದಾಯಿಸಿ ಕೊಳ್ಳಬಹುದಾಗಿದೆ ಪತ್ರಿಕಾ ಪ್ರಕಟಣೆ ತಿಳಿಸಿದೆ. ಕ್ರೀಡಾಕೂಟದಲ್ಲಿ ಪತ್ರಿಕೆ ಹಾಗೂ ದೃಶ್ಯ ಮಾಧ್ಯಮದ ಪತ್ರಕರ್ತರಿಗೆ, ಛಾಯಾಗ್ರಾಹಕರಿಗೆ ಮತ್ತು ಸಿಬ್ಬಂದಿಗೆ ಮಾತ್ರ ಅವಕಾಶ. ಸ್ಪರ್ಧೆಗಳಲ್ಲಿ ಭಾಗವಹಿಸುವ ಎಲ್ಲ ಸ್ಪರ್ಧಾಳುಗಳು ಸಂಘದ ಅಥವಾ ಸಂಸ್ಥೆಯ ಗುರುತು ಚೀಟಿ ಹೊಂದಿರಬೇಕು. ಗುಂಪು ಆಟಗಳಿಗೆ ಪ್ರತ್ಯೇಕವಾಗಿ ಸಂಸ್ಥೆಗಳ ಹೆಸರಿನಲ್ಲಿ ತಂಡಗಳಿಗೆ ಭಾಗವಹಿಸಲು ಅವಕಾಶವಿದೆ, ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಬೆಳಗ್ಗೆ 09ಕ್ಕೆ ಕ್ರೀಡಾಂಗಣದಲ್ಲಿ ಕಡ್ಡಾಯವಾಗಿ ಹಾಜರಿದ್ದು ತಮ್ಮ ಹೆಸರನ್ನು ನೋಂದಾಯಿಸಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಡಬ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು

error: Content is protected !!
Scroll to Top