(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 02. ಕ್ಯಾಂಪಸ್ ಫ್ರಂಟ್ ಉಪ್ಪಿನಂಗಡಿ ಇದರ ವತಿಯಿಂದ ನೀಟ್ ಪ್ರವೇಶ ಪರೀಕ್ಷೆಯ ಶುಲ್ಕ ಹೆಚ್ಚಳ ವಿರೋಧಿಸಿ ಕಡಬ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ವಿದ್ಯಾರ್ಥಿಗಳಿಗಾದ ಸಂಕಷ್ಟವನ್ನು ಸಂಪೂರ್ಣವಾಗಿ ವಿವರಿಸಲಾಯಿತು ಬಳಿಕ ಕಡಬ ಜ್ಯೂನಿಯರ್ ಕಾಲೇಜು ಪಕ್ಕದಲ್ಲಿ ವಿದ್ಯಾರ್ಥಿಗಳಿಂದ ಪ್ಲೇಕಾರ್ಡ್ ಪ್ರದರ್ಶನ ನಡೆಯಿತು.
ಈ ಸಂದರ್ಭದಲ್ಲಿ ಉಪ್ಪಿನಂಗಡಿ ಏರಿಯಾ ಉಪಾಧ್ಯಕ್ಷರಾದ ಅಫ್ಸಲ್ ಕಡಬ ಹಾಗೂ ಕಡಬ ಯುನಿಟ್ ಮುಖಂಡರಾದ ಆಸಿರ್ ಕಡಬ ಮತ್ತು ಸದಸ್ಯರು ಉಪಸ್ಥಿತರಿದ್ದರು.