ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಕಡಬ ತಾಲೂಕು ಅಧ್ಯಕ್ಷ ಎಸ್ಡಿಪಿಐ ಪಕ್ಷಕ್ಕೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 03. ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಇದರ ಕಡಬ ತಾಲೂಕು ಸಮಿತಿ ಅಧ್ಯಕ್ಷರಾದ ವಿಕ್ಟರ್ ಮಾರ್ಟಿಸ್ ರವರು ಎಸ್ಡಿಪಿಐ ಪಕ್ಷದ ತತ್ವ ಹಾಗೂ ಸಿದ್ದಾಂತವನ್ನು ಒಪ್ಪಿಕೊಂಡು ಮಂಗಳವಾರದಂದು ಪಕ್ಷಕ್ಕೆ ಸೇರ್ಪಡೆಗೊಂಡರು.

ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆಯವರು ಪಕ್ಷದ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಶಾಲು ಹಾಕುವ ಮೂಲಕ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯ ಮುಖಂಡರಾದ ಜಲೀಲ್ ಕೆ, ಆನಂದ ಮಿತ್ತಬೈಲ್, ಇಕ್ಬಾಲ್ ಬೆಳ್ಳಾರೆ, ಜಿಲ್ಲಾ ಉಪಾಧ್ಯಕ್ಷರಾದ ಇಕ್ಬಾಲ್ ಐಎಂಆರ್, ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್, ಕಾರ್ಯದರ್ಶಿಗಳಾದ ಅನ್ವರ್ ಸಾದತ್ ಬಜತ್ತೂರು, ಜಮಾಲ್ ಜೋಕಟ್ಟೆ, ಅಶ್ರಫ್ ಮಂಚಿ, ಕೋಶಾಧಿಕಾರಿ ನೂರುಲ್ಲಾ ಕುಲಾಯಿ ಹಾಗೂ ಜಿಲ್ಲಾ ಸಮಿತಿ ಸದಸ್ಯರು ಜಿಲ್ಲೆಯ ವಿಧಾನ ಸಭಾ ಸಮಿತಿ ಅಧ್ಯಕ್ಷರುಗಳು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Also Read  ಪುತ್ತೂರು: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ

error: Content is protected !!
Scroll to Top