ಉಡುಪಿ: ಜಿಂಕೆಗೆ ಬೈಕ್ ಢಿಕ್ಕಿ ➤ ಸವಾರ ಗಂಭೀರ ಗಾಯ, ಜಿಂಕೆ ಸಾವು



(ನ್ಯೂಸ್ ಕಡಬ) newskadaba.com ಹೆಬ್ರಿ, ಮಾ. 03. ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಕನ್ಯಾನ ಎಂಬಲ್ಲಿ ಬುಧವಾರದಂದು ನಡೆದಿದೆ.





ಖಾಸಗಿ ಬಸ್ಸೊಂದರ ಚಾಲಕ ಹರೀಶ್ ಎಂಬವರು ಇಂದು ಬೆಳಗ್ಗೆ ಬೈಕ್‍ ನಲ್ಲಿ ಸಂಚರಿಸುತ್ತಿದ್ದ ವೇಳೆ ಜಿಂಕೆಯೊಂದು ಏಕಾಏಕಿ ರಸ್ತೆಗೆ ಜಿಗಿದ ಪರಿಣಾಮ, ನಿಯಂತ್ರಣ ಕಳೆದುಕೊಂಡ ಬೈಕ್ ಜಿಂಕೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ವೇಳೆ ಗಂಭೀರ ಗಾಯಗೊಂಡ ಹರೀಶ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top