? ರಾಸಲೀಲೆ ಸಿಡಿ ಯಿಂದಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆ ➤ ಬೆಂಬಲಿಗಿನಿಂದ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಬೆಳಗಾವಿ, ಮಾ. 03. ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ಆಗ್ರಹಿಸಿ ಸಚಿವರ ಬೆಂಬಲಿಗನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ.

ಸಚಿವರ ರಾಜೀನಾಮೆ ಅಂಗೀಕರಿಸಬಾರದು ಎಂದು ಒತ್ತಾಯಿಸಿ ಗೋಕಾಕ್ ನಲ್ಲಿ ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬೆಂಬಲಿಗನೋರ್ವ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಪೊಲೀಸರು ತಕ್ಷಣವೇ ಆತನನ್ನು ರಕ್ಷಿಸಿದ್ದಲ್ಲದೇ ಪ್ರತಿಭಟನೆ ನಡೆಸುತ್ತಿದ್ದ ರಮೇಶ್ ಜಾರಕಿಹೊಳಿ ಬೆಂಬಲಿಗರನ್ನು ಬಂಧಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

Also Read  ಪರೀಕ್ಷೆ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ

error: Content is protected !!
Scroll to Top