ಸುರತ್ಕಲ್: ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ ➤ ಪ್ರಶ್ನಿಸಿದ ಪ್ರಾಂಶುಪಾಲರಿಗೆ ಹಲ್ಲೆ ನಡೆಸಿದ ವಿದ್ಯಾರ್ಥಿಗಳು



(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 05. ದೇರಳಕಟ್ಟೆ ಕಾಲೇಜಿನ ರ್ಯಾಗಿಂಗ್ ಪ್ರಕರಣದ ಬಳಿಕ ಈಗ ಇದೀಗ ಸುರತ್ಕಲ್ ಬಳಿಯ ಮುಕ್ಕದಲ್ಲಿ ರ್ಯಾಗಿಂಗ್ ನಡೆಸಿದ್ದು, ಘಟನೆಗೆ ಸಂಬಂಧಿಸಿ ಮುಕ್ಕದ ಶ್ರೀನಿವಾಸ ಕಾಲೇಜಿನ ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.





ರ್ಯಾಗಿಂಗ್ ನಡೆಸಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು. ಈ ಬಗ್ಗೆ ಪ್ರಾಂಶುಪಾಲರು ನಾಲ್ವರನ್ನು ಕರೆದು ಬುದ್ಧಿ ಮಾತು ಹೇಳಿ, ಡಿಬಾರ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ ಸಿಟ್ಟುಗೊಂಡ ಮೂವರು ವಿದ್ಯಾರ್ಥಿಗಳು ಪ್ರಾಂಶುಪಾಲರ ಮೇಲೆಯೇ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದ್ದು, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಹಲ್ಲೆ ಮತ್ತು ರ್ಯಾಗಿಂಗ್ ಪ್ರತ್ಯೇಕ ಪ್ರಕರಣ ದಾಖಲಾಗಿದೆ.






error: Content is protected !!
Scroll to Top