ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಬೋಟ್ ಇಬ್ಭಾಗ ➤ ಐವರು ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ. 05. ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ಮೀನುಗಾರಿಕಾ ಬೋಟ್ ಮಗುಚಿದ ಪರಿಣಾಮ ಐವರು ಮೀನುಗಾರರು ಸಮುದ್ರದಲ್ಲಿ ಸಿಲುಕಿದ ಘಟನೆ ಬೇಕಲ ಸಮುದ್ರದಲ್ಲಿ ನಡೆದಿದೆ.

ಸುಮಾರು ಎರಡು ಗಂಟೆಗಳ ಕಾಲ ಜೀವನ್ಮರಣದ ನಡುವೆ ಒದ್ದಾಡುತ್ತಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ಹಾಗೂ ಮೀನುಗಾರಿಕಾ ಇಲಾಖೆಯ ರಕ್ಷಣಾ ಪಡೆ ಸಿಬಂದಿಗಳು ರಕ್ಷಿಸಿದ್ದಾರೆ. ಕಾಸರಗೋಡು ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಬೋಟ್ ಅಲೆಗಳ ಅಬ್ಬರಕ್ಕೆ ಮಗುಚಿ ಇಬ್ಬಾಗಗೊಂಡಿದ್ದು, ಬೋಟ್ ನ ಒಂದು ಭಾಗದಲ್ಲಿ ಜೀವನ್ಮರಣದ ಸ್ಥಿತಿಯಲ್ಲಿ ಒದ್ದಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಕರಾವಳಿ ರಕ್ಷಣಾ ಪಡೆಗೆ ಲಭಿಸಿದ ಮಾಹಿತಿಯಂತೆ ದೌಡಾಯಿಸಿದ ರಕ್ಷಣಾ ಪಡೆ ಸಿಬಂದಿಗಳು ಇವರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ.

Also Read  ಬೆಳ್ಳಾರೆ: ಸಂಬಂಧಿ ಯುವಕನಿಂದ ಯುವತಿಯ ಮೇಲೆ ಅತ್ಯಾಚಾರ

error: Content is protected !!
Scroll to Top