ಎಲಿಮಲೆ: ದೇವಚಳ್ಳ ಶಾಲೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಎಲಿಮಲೆ, ಮಾ. 05. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ಮಾ. 05 ರಂದು ಎಲಿಮಲೆಯ ದೇವಚಳ್ಳ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗೆ ಭೇಟಿ ನೀಡಿ ಇಲ್ಲಿ ನಡೆಯುತ್ತಿರುವ ಉತ್ತಮ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.

 

ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಂಭ್ರಮ ನಡೆಯಲಿರುವುದರಿಂದ ವಿಶೇಷ ಅನುದಾನ ಒದಗಿಸಬೇಕೆಂದು ಮನವಿ ಸಲ್ಲಿಸಲಾಯಿತು. ಖಂಡಿತವಾಗಿಯೂ ಅನುದಾನ ಕೊಡುತ್ತೇನೆ ಕಾರ್ಯಕ್ರಮಕ್ಕೆ ಆಮಂತ್ರಿಸಿ, ಬರುತ್ತೇನೆ ಎಂದು ಸಚಿವರು ಭರವಸೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ್, ಮುಖ್ಯ ಶಿಕ್ಷಕ ಶ್ರೀಧರ.ಕೆ, ಎಸ್ ಡಿಎಂಸಿ ಅಧ್ಯಕ್ಷ ರಮಾನಂದ ಎಲಿಮಲೆ, ಮುಖ್ಯ ಶಿಕ್ಷಕ ಗೋಪಿನಾಥ್ ಮೆತ್ತಡ್ಕ, ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಸದಸ್ಯೆ ವಂದನಾ ಹೊಸ್ತೋಟ, ದೇವಚಳ್ಳ ಕ್ಲಸ್ಟರ್ ಸಿ ಆರ್ ಪಿ ಸಂತೋಷ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಪ್ರಸಾದ್ ಹಾಗೂ ಕಾರ್ಯದರ್ಶಿ ರಾಜಗೋಪಾಲ ಅಂಬೆಕಲ್ಲು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

Also Read  ಬೆಳ್ಳಾರೆ ಝಕರಿಯ್ಯ ಜುಮಾ ಮಸೀದಿ ಆಡಳಿತ ಮಂಡಳಿಗೆ ಸೆ. 09ರಂದು ಚುನಾವಣೆ - ನಾಮಪತ್ರ ಸಲ್ಲಿಕೆಗೆ ಆ. 17ರಂದು ಲಾಸ್ಟ್ ಡೇಟ್..!

error: Content is protected !!
Scroll to Top