ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ನಾಲ್ವರು ದುರ್ಮರಣ



(ನ್ಯೂಸ್ ಕಡಬ) newskadaba.com ಮಂಡ್ಯ, ಮಾ. 06. ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ವೃತ್ತದ ಬಳಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.





ಕಾರಿನಲ್ಲಿದ್ದ ಜಯದೇವ್, ಕಿರಣ್ ಅಶೋಕ್‌ ಸೇರಿ ಮತ್ತಿಬ್ಬರು ರಸ್ತೆಯ ಪಕ್ಕದಲ್ಲಿ ನಿಂತಿದ್ದು, ವೇಗವಾಗಿ ಬಂದ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ. ಘಟ‌ನೆಯಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ. ಮದ್ದೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top