ಉಪ್ಪಿನಂಗಡಿ: ಅಶಾಂತಿ ಕದಡುವ ಕೋಮುವಾದಿ ಕಿಡಿಗೇಡಿಗಳ ವಿರುದ್ಧ ಮತ್ತು ಶಾಸಕರ ದೇಶದ್ರೋಹಿ ಹೇಳಿಕೆ ಖಂಡಿಸಿ ಎಸ್ಡಿಪಿಐ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 07. ಉಪ್ಪಿನಂಗಡಿಯಲ್ಲಿ ಸದಾ ಶಾಂತಿ ಕದಡುವ ಕೋಮುವಾದಿ ಶಕ್ತಿಗಳ ವಿರುದ್ಧ ಎಸ್ಡಿಪಿಐ ಉಪ್ಪಿನಂಗಡಿ ವಲಯದ ವತಿಯಿಂದ ಹೊಸ ಬಸ್ ನಿಲ್ದಾಣದ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಎಸ್ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಮಾತನಾಡಿ, ಉಪ್ಪಿನಂಗಡಿಯಲ್ಲಿ ಕೋಮುಗಲಭೆ ಸೃಷ್ಟಿಸಲು ಸಂಘಪರಿವಾರ ನಿರಂತರವಾಗಿ ಪ್ರಯತ್ನ ಪಡುತ್ತಿದ್ದು, ಹಲವಾರು ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಸಂಘಪರಿವಾರ ಕೋಮುಗಲಭೆ ನಡೆಸಲು ಪ್ರಯತ್ನಿಸಿದಾಗ ಎಸ್‌ಡಿಪಿಐ ಪಕ್ಷ ಸಮರ್ಥವಾಗಿ ಎದುರಿಸಿದೆ. ಇನ್ನೂ ಮುಂದೆ ಕೂಡ ಅಶಾಂತಿಯನ್ನು ಸೃಷ್ಟಿಸುವ ಸಂಘಪರಿವಾರದ ವಿರುದ್ಧ ಹೋರಾಟ ನಡೆಸಲಿದ್ದೇವೆ. ಮಾತ್ರವಲ್ಲದೇ ಪುತ್ತೂರು ಶಾಸಕ ಸಂಜೀವ ಮಠಂದೂರುರವರು ಉಪ್ಪಿನಂಗಡಿ ಜನತೆಯನ್ನು ದೇಶದ್ರೋಹಿಗಳು ಮತಾಂಧರು ಎಂಬ ಕೋಮು ಪ್ರಚೋದನಕಾರಿ ಹೇಳಿಕೆ ಮತ್ತು ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡಿದರ ಪರಿಣಾಮವಾಗಿ ನಿನ್ನೆ ರಾತ್ರಿ ವೇಳೆಯಲ್ಲಿ ಸಂಘಪರಿವಾರ ಕಾರ್ಯಕರ್ತರು ಎರಡು ಅಂಗಡಿಗಳಿಗೆ ಬೆಂಕಿ ಹಾಕಿ ಧ್ವಂಸಗೊಳಿಸಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆ ಕಿಡಿಗೇಡಿಗಳ ವಿರುದ್ಧ ಯಾವುದೇ ಒತ್ತಡಕ್ಕೆ ಮಣಿಯದೇ ಸೂಕ್ತ ಕ್ರಮ ಕೋಳ್ಳಬೇಕೆಂದು ಒತ್ತಾಯಿಸುತ್ತಿದ್ದೇವೆ.
ಈ ಸಂದರ್ಭದಲ್ಲಿ ಅಬ್ದುಲ್ ರಝ್ಜಾಕ್ ಸೀಮಾ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಸಭೆಯಲ್ಲಿ ಕೋಮುವಾದಿ ಸಂಘಪರಿವಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಪ್ರತಿಭಟನಾ ಸಭೆಯಲ್ಲಿ ಉಪ್ಪಿನಂಗಡಿ ಎಸ್ಡಿಪಿಐ ವಲಯಾಧ್ಯಕ್ಷ ಮುಸ್ತಫಾ ಲತೀಫಿ, ಉಪಾಧ್ಯಕ್ಷ ಮಜೀದ್ ಮಠ, ಉಪ್ಪಿನಂಗಡಿ ಗ್ರಾ.ಪಂ ಸದಸ್ಯರಾದ ರಶೀದ್ ಮಠ ಮತ್ತು ಮೈಸಿದಿ ಇಬ್ರಾಹಿಂ, ಪಿಎಫ್ಐ ಉಪ್ಪಿನಂಗಡಿ ಜಿಲ್ಲಾ ಅದ್ಯಕ್ಷ ಅಬ್ದುಲ್ ಹಮೀದ್ ಮೆಜೆಸ್ಟಿಕ್, ಸಮಿತಿ ಸದಸ್ಯರಾದ ಮುಸ್ತಫಾ ಪೆರ್ನೆ, ರಝಾಕ್ ಕುದ್ರಡ್ಕ, ಶುಕೂರ್ ಕುಪ್ಪೆಟ್ಟಿ, ಮುನೀರ್ ಎಣ್ಮಾಡಿ, ಹಮೀದ್, ಬಿ.ಕೆ.ಸಲೀಂ ಕೊಡಿಪ್ಪಾಡಿ ಉಪಸ್ಥಿತರಿದ್ದರು. ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕೋಶಾಧಿಕಾರಿ ಇಕ್ಬಾಲ್ ಕೆಂಪಿ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

error: Content is protected !!

Join the Group

Join WhatsApp Group