ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಆರೋಗ್ಯದಲ್ಲಿ ಏರುಪೇರು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 07. ಉತ್ತರಕನ್ನಡ ಸಂಸದ, ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಯವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದಾರೆ.

ಹಲವು ವರ್ಷಗಳಿಂದ ಕಾಡುತ್ತಿದ್ದ ಬೆನ್ನುನೋವು ಹಾಗೂ ಕಾಲು ನೋವಿನಿಂದಾಗಿ ಸಂಸದರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮಾ.6 ರಂದು ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿ ದೆಹಲಿಯ ಮನೆಗೆ ಹೋಗಿದ್ದಾರೆ. ವೈದ್ಯರು ದೀರ್ಘಾವಧಿ ವಿಶ್ರಾಂತಿ ಪಡೆಯುಲು ಸೂಚಿಸಿರುವ ಹಿನ್ನಲೆಯಲ್ಲಿ ಪೂರ್ಣವಾಗಿ ಗುಣಮುಖರಾಗುವ ತನಕ ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಎರಡೂ ಕಾಲಿಲ್ಲದ ಯುವತಿಗೆ "ಬಾಳ ದೀಪ" ವಾದ ಸಂ"ದೀಪ"

error: Content is protected !!
Scroll to Top