? ಉಡುಪಿ: ಪೇಜಾವರ ಮಠದಲ್ಲಿ ಅಗ್ನಿ ಅವಘಡ ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 07. ವಿದ್ಯುತ್ ಅವಘಡದಿಂದಾಗಿ ಅಗ್ನಿ ಅನಾಹುತ ಸಂಭವಿಸಿದ ಘಟನೆ ಉಡುಪಿಯ ಪೇಜಾವರ ಮಠದಲ್ಲಿ ನಡೆದಿದೆ.

ಮಠದಲ್ಲಿ ಅಳವಡಿಸಲಾಗಿದ್ದ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಮಠದ ಸಿಬ್ಬಂದಿಗಳು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಕ್ಷಣವೇ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾವುದೇ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

Scroll to Top