ಉಡುಪಿ: ದೇವಸ್ಥಾನದ ಒಳಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೋಟ, ಮಾ. 07. ಇಲ್ಲಿನ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದ ಒಳಗೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ನಹತ್ಯೆಗೈದ ಯುವಕನನ್ನು ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಸೆಂಟ್ರಿಂಗ್ ಕೆಲಸಗಳಿಗೆ ಹೋಗುತ್ತಿದ್ದ ಇವರು ಪ್ರತೀ ದಿನ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿನ ಕೆಲಸ ಕಾರ್ಯಗಳಿಗೂ ನೆರವಾಗುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಇವರು ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ದೇವಸ್ಥಾನದ ಬಾವಿಯ ಹಗ್ಗದಿಂದ ನೇಣು ಬಿಗಿದು ಚಂದ್ರ ಪೂಜಾರಿಯವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ರವಿವಾರ ಬೆಳಗ್ಗೆ ಕಸ ಗುಡಿಸುವ ಕೆಲಸಗಾರರು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ. ಕೋಟ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನೆಡೆಸಿದ್ದಾರೆ.

Also Read  ಅಂತರ್ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ➤ ಜ್ಞಾಜೋದಯ ಬೆಥನಿ ದ್ವಿತೀಯ

error: Content is protected !!
Scroll to Top