(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 07. NSUI ಕ್ಯಾಂಪಸ್ ಮೀಟ್ ಸಂದರ್ಭದಲ್ಲಿ ಅಹವಾಲು ಸಲ್ಲಿಸಿದ್ದ ವಿದ್ಯಾರ್ಥಿಗಳ ಬೇಡಿಕೆಯ ಮೇರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಹಾಸ್ಟೆಲ್ ನಲ್ಲಿ ಈವರೆಗೂ ಅಲಾಟ್ಮೆಂಟ್ ನಡೆಯದಿರುವ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಚಾರಿಸಲಾಯಿತು.
ಈ ಶೈಕ್ಷಣಿಕ ವರ್ಷದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಹಾಸ್ಟೆಲ್ ಸಂಬಂದಿಸಿದ ಅಲೋಟ್ ಮೆಂಟ್ ಈವರೆಗೂ ನಡೆಯದೇ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ಶೈಕ್ಷಣಿಕ ವರ್ಷದ ಅರ್ಧ ಭಾಗ ಮುಕ್ತಾಯವಾಗುವ ಹಂತದಲ್ಲಿದೆ. ಆದುದರಿಂದ ವಿದ್ಯಾರ್ಥಿಗಳ ಈ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸುಳ್ಯ ವಿಧಾನಸಭಾ ಕ್ಷೇತ್ರದ ವತಿಯಿಂದ ಮನವಿ ಸಲ್ಲಿಸಿದರು. ವಾರದೊಳಗೆ ಸಮಸ್ಯೆ ಪರಿಹಾರವಾಗಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸುಳ್ಯ ಎನ್ ಎಸ್ ಯು ಐ ನೂತನ ಅಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ, ಆಶಿಕ್ ಅರಂತೋಡು, ಆಸಿಫ್ ಬಾಳಿಲ, ಪವನ್ ಅಂಬೆಕಲ್ಲು, ಯಶವಂತ್ ಅಡ್ಯಡ್ಕ, ರಿಯಾಜ್ ಸುಳ್ಯ, ಧನುಷ್ ಕುಕ್ಕೆಟಿ ಮೊದಲಾದವರು ಉಪಸ್ಥಿತರಿದ್ದರು.