ಎಬಿವಿಪಿ ಸುಬ್ರಹ್ಮಣ್ಯ ಘಟಕದ ವತಿಯಿಂದ ಮಹಿಳಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ. 07. ಎಬಿವಿಪಿ ಕುಕ್ಕೇ ಸುಬ್ರಹ್ಮಣ್ಯ ಘಟಕದ ವತಿಯಿಂದ ರವಿವಾರದಂದು ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಪಂಚಾಯತ್ ಸಭಾಂಗಣ ಸುಬ್ರಹ್ಮಣ್ಯದಲ್ಲಿ ಹಮ್ಮಿಕೊಳ್ಳಲಾಯಿತು.

 


ಈ ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತಾ ಜಿ. ಇವರು ವಹಿಸಿದ್ದರು. ಮಹಿಳಾ ಹಾಗೂ ಮಕ್ಕಳ ತಜ್ಞೆ ಡಾ/ ರಜನಿ, ಸುಳ್ಯ ಇವರು ಬೌದ್ದಿಕ್ ಅನ್ನು ನೆರವೇರಿಸಿದರು ಹಾಗೂ ಅತಿಥಿಗಳಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ವನಜ ಭಟ್ ಅವರು ಉಪಸ್ಥಿತರಿದ್ದರು. ಈ ಸಂಧರ್ಭದಲ್ಲಿ ಶ್ರೀಮತಿ ಭವ್ಯ ಯಕ್ಷಗಾನ ಭಾಗವತರಿಗೆ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಕುಮಾರಿ ಮಂದಾರ ಉಪಸ್ಥಿತರಿದ್ದರು.

Also Read  ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ

error: Content is protected !!
Scroll to Top