ಕಡಬ: ಅಧಿಕಾರಿಗಳಿಂದ ದೌರ್ಜನ್ಯಕ್ಕೊಳಗಾದ ಪ್ರಸಾದ್ ಮನೆಗೆ ಸಾಮಾಜಿಕ ಕಾರ್ಯಕರ್ತರ ಭೇಟಿ ➤ ಹೋರಾಟಕ್ಕೆ ಸಿದ್ದತೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 07. ಸುಬ್ರಹ್ಮಣ್ಯ ವಲಯ ರಕ್ಷಿತಾರಣ್ಯದಲ್ಲಿ ಅಕ್ರಮ ಮರ ಕಳ್ಳತನದ ಬಗ್ಗೆ ಐತ್ತೂರಿನ ಮೂಜೂರು ನಿವಾಸಿ ಪ್ರಸಾದ್ ಎಂಬವರು ಇತ್ತೀಚೆಗಷ್ಟೇ ದೂರು ನೀಡಿದ್ದ ಹಿನ್ನೆಲೆ, ಅವರ ಮನೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳ ನಡೆಯನ್ನು ಖಂಡಿಸಿ, ಮುಂದಿನ ಹೋರಾಟಕ್ಕಾಗಿ ನೀತಿ ಸಾಮಾಜಿಕ ಸಂಘಟನೆಯ ರಾಜ್ಯಾಧ್ಯಕ್ಷ ಜಯನ್.ಟಿ ಹಾಗೂ ಉಪ್ಪಿನಂಗಡಿಯ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಡಿಕೋಸ್ತ ಮತ್ತು ರಹಿಮಾನ್ ಅವರು ಭಾನುವಾರದಂದು ಪ್ರಸಾದ್ ರವರ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಬಳಿಕ ಕಡಬ ಠಾಣೆಯ ತೆರಳಿ ಸುದ್ದಿಗಾರರ ಜೊತೆ ಮಾತನಾಡಿ, ಅರಣ್ಯಾಧಿಕಾರಿಗಳು ದೂರುದಾರನನ್ನು ಗುರಿಯಾಗಿಸಿಕೊಂಡಿದ್ದು, ಮನೆಗೆ ನುಗ್ಗಿ ದೌರ್ಜನ್ಯ ನಡೆಸಿದ್ದಾರೆ. ಅಲ್ಲದೇ ಅಧಿಕಾರ ವ್ಯಾಮೋಹದಿಂದ ದುರುಪಯೋಗಪಡಿಸಿ ಸುಳ್ಳು ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ. ಇಷ್ಟೆಲ್ಲಾ ಆದರೂ ಜನಪ್ರತಿನಿಧಿಗಳು ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಿರುವುದು ವಿಪರ್ಯಾಸ. ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕಾನೂನು ಹೋರಾಟದ ಜೊತೆಗೆ ಇತರ ಹೋರಾಟದ ಸಿದ್ದತೆ ನಡೆಯುತ್ತಿದೆ ಎಂದರು.

Also Read  ದಂಪತಿಗಳನ್ನು ಒಂದು ಮಾಡಲಿದೆ ಈ ಪರಿಹಾರ ಮತ್ತು ದಿನ ಭವಿಷ್ಯ

error: Content is protected !!
Scroll to Top