ವಿಆರ್.ಎಲ್ ಲಾಜಿಸ್ಟಿಕ್ ಸಂಸ್ಥೆಯ ವತಿಯಿಂದ ಧರ್ಮಸ್ಥಳಕ್ಕೆ ಎರಡು ಡಬಲ್ ಡೆಕ್ಕರ್ ಬಸ್

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಮಾ. 09. ಇಲ್ಲಿನ “ಮಂಜೂಷಾ” ವಾಹನ ಸಂಗ್ರಹಾಲಯಕ್ಕೆ ಮುಂಬೈನಲ್ಲಿರುವ ಧರ್ಮಸ್ಥಳದ ಭಕ್ತರು ಸಂಗ್ರಹಿಸಿ ಕಳುಹಿಸಿದ ಎರಡು ಡಬಲ್ ಡೆಕ್ಕರ್ ಬಸ್‌ ಗಳು ಧರ್ಮಸ್ಥಳಕ್ಕೆ ತಲುಪಿವೆ.

ಮುಂಬೈನಿಂದ ಧರ್ಮಸ್ಥಳಕ್ಕೆ ಡಬಲ್ ಡೆಕ್ಕರ್ ಬಸ್‌ಗಳ ಸಾಗಾಟವನ್ನು ವಿ.ಆರ್.ಎಲ್. ಲಾಜಿಸ್ಟಿಕ್ ಸಂಸ್ಥೆಯವರು ಉಚಿತವಾಗಿ ಮಾಡಿಕೊಟ್ಟಿದ್ದು, ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಅವರಿಬ್ಬರಿಗೂ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು ಕೋರಿ ಶುಭ ಹಾರೈಸಿದ್ದಾರೆ.

Also Read  ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆದ ಕೂಲಿ ಕಾರ್ಮಿಕರ ಮಗ..!

error: Content is protected !!