(ನ್ಯೂಸ್ ಕಡಬ) newskadaba.com ನವದೆಹಲಿ, ಅ.22. ಅಕ್ರಮ ಹಣ ವರ್ಗಾವಣೆ ತಡೆ ನಿಯಮಗಳ ಅಡಿಯಲ್ಲಿ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂದು ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ.
ಈ ಹಿಂದೆ ಕೇಂದ್ರ ಸರ್ಕಾರವು ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 2017 ಡಿಸೆಂಬರ್ 31 ಅಂತಿಮ ದಿನ ಎಂಬ ಆದೇಶವನ್ನು ಹೊರಡಿಸಿತ್ತು. ಅದರ ಬಗ್ಗೆ ರಿಸರ್ವ್ ಬ್ಯಾಂಕ್ ಯಾವುದೇ ಆದೇಶ ನೀಡಿಲ್ಲ ಎಂದು ತಿಳಿಸಿತ್ತು. ಆದರೆ ಇದೀಗ ಆಧಾರ್ ಲಿಂಕ್ ಕುರಿತು ಜನತೆಯಲ್ಲಿ ಮೂಡಿದ್ದ ಗೊಂದಲಗಳಿಗೆ ಈಗ ಆರ್ಬಿಐ ತೆರೆ ಎಳೆದಿದ್ದು, ಖಾತೆಗಳಿಗೆ ಆಧಾರ್ ಲಿಂಕ್ ಮಾಡಿಸುವುದು ಕಡ್ಡಾಯ ಎಂದು ತಿಳಿಸಿದೆ.
ಈಗಾಗಲೇ ತೆರೆಯಲಾಗಿರುವ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಬೇಕಾಗಿದ್ದು, ಹೊಸ ಖಾತೆಯನ್ನು ಆಂಭಿಸಬೇಕಾದರೆ 12 ಸಂಖ್ಯೆಗಳ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಅರ್ಜಿಯಲ್ಲಿ ನಮೂದಿಸಬೇಕಿದೆ ಎಂದು ತಿಳಿಸಿದೆ.
w