ಸುಳ್ಯ: ಕಾಂಗ್ರೆಸ್ ಮುಖಂಡ ಹಾಜಿ ಬೀರಾ ಮೊಯ್ದಿನ್ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 10. ಹಿರಿಯ ಕಾಂಗ್ರೆಸ್ ಮುಖಂಡ, ಕನಕಮಜಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಜಿ ಬೀರಾ ಮೊಯ್ದಿನ್ (70) ನಿಧನರಾಗಿದ್ದಾರೆ.

 

ಕೆಲದಿನಗಳ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಬುಧವಾರದಂದು ಮುಂಜಾನೆ ನಿಧನರಾದರು. ಮೃತರು ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಕನಕಮಜಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿಯೂ, ಟಿಎಪಿಸಿಎಂಎಸ್ ಉಪಾಧ್ಯಕ್ಷರಾಗಿ, ಸುಳ್ಯ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾಗಿ, ಭೂನ್ಯಾಯ ಮಂಡಳಿ ಸದಸ್ಯರಾಗಿಯೂ ಹಲವು ಕಡೆ ಸೇವೆ ಸಲ್ಲಿಸಿದ್ದರು. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸೇರಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನೂ ನಿರ್ವಹಿಸಿದ್ದರು. ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದ ಇವರು ಹಾಲಿ ನಿರ್ದೇಶಕರಾಗಿದ್ದರು. ಸುಳ್ಯ ತಾಲೂಕು ಜಮೀಯತುಲ್ ಫಲಾಹ್ ಮಾಜಿ ಅಧ್ಯಕ್ಷರಾಗಿದ್ದರು. ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದ ಬೀರಾ ಮೊಯ್ದೀನ್ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Also Read  ಇಂದು(ಮೇ.15) SSLC ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನ

error: Content is protected !!
Scroll to Top