ಮಾ. 15 ಹಾಗೂ 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 10. ಮಾ.15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೀಗಾಗಿ ಎರಡು ದಿನಗಳ ಕಾಲ ಸ್ಟೇಟ್ ಬ್ಯಾಂಕ್ ಸೇವೆಯಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರವು ಈಗಾಗಲೇ ಎರಡು ಸರ್ಕಾರಿ ಬ್ಯಾಂಕ್​ ಗಳ ಖಾಸಗೀಕರಣಕ್ಕೆ ಮುಂದಾಗಿದ್ದು, ಇದನ್ನು ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿಯು) ಮಾ. 15ರಂದು ಬ್ಯಾಂಕ್ ನೌಕರರು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದೆ ಎಂದು ಭಾರತೀಯ ಬ್ಯಾಂಕ್​ಗಳ ಸಂಘ (ಐಬಿಎ) ತಿಳಿಸಿದೆ. ಸಾರ್ವಜನಿಕ ವಲಯದ ಬ್ಯಾಂಕ್​ಗಳ (ಪಿಎಸ್‌ಬಿ) ಪೈಕಿ ಎರಡು ಬ್ಯಾಂಕ್​ಗಳು ಹಾಗೂ ಒಂದು ವಿಮಾ ಕಂಪನಿ ಖಾಸಗೀಕರಣಗೊಳಿಸುವುದಾಗಿ ವಿತ್ತ ಸಚಿವೆ ಬಜೆಟ್ ವೇಳೆ‌ ತಿಳಿಸಿದ್ದರು. ಹೀಗಾಗಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ) ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ)‌ ಸೇರಿದಂತೆ 9 ಒಕ್ಕೂಟಗಳು ಮುಷ್ಕರಕ್ಕೆ ಕರೆ ನೀಡಿವೆ.

Also Read  ಆ. 15ರ ಸ್ವಾತಂತ್ರ್ಯೋತ್ಸವ ಸಮಾರಂಭಕ್ಕೆ ಉಡುಪಿಯ ದಂಪತಿಗೆ ಆಹ್ವಾನ

error: Content is protected !!
Scroll to Top