ಕೋಟ: ದೇವಸ್ಥಾನದ ಬಾವಿಯೊಳಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೋಟ, ಮಾ. 10. ದೇವಸ್ಥಾನದ ಬಾವಿಯೊಳಗೆ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯಲ್ಲಿರುವ ಶಿರಸಿ ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ನಡೆದಿದೆ.

ಆತ್ಮಹತ್ಯೆಗೈದವನ್ನು ಕೋಟತಟ್ಟು ಪಡುಕರೆ ನಿವಾಸಿ ಚೆನ್ನಯ್ಯ ಪೂಜಾರಿ (51 ವರ್ಷ) ಎಂದು ಗುರುತಿಸಲಾಗಿದೆ. ಪಡುಕೆರೆ ಸಮುದ್ರ ತೀರದಲ್ಲಿ ಬೀಡಾ ಅಂಗಡಿಯೊಂದನ್ನು ನಡೆಸಿ, ಜೀವನ ಸಾಗಿಸುತ್ತಿದ್ದ ಇವರು ಬಾವಿಯ ಹಗ್ಗಕ್ಕೆ ನೇಣು ಬಿಗಿದು, ಬಾವಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆನ್ನಯ್ಯ ಪೂಜಾರಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಳೆದ ದಿನಗಳ ಹಿಂದೆಯಷ್ಟೇ ಚಂದ್ರ ಪೂಜಾರಿ ಎಂಬಾತ ತೆಕ್ಕಟ್ಟೆ ದೇವಸ್ಥಾನದೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರ ಬೆನ್ನಲ್ಲೇ ದೇವಳದ ಬಾವಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಕೋಟ ಠಾಣಾ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಪರಿಶೀಲನೆ ನಡೆಸಿದ್ದಾರೆ.

Scroll to Top