ಮಂಗಳೂರು: ಯುವತಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ- ಕೊಲೆ ಶಂಕೆ ಹಿನ್ನೆಲೆ ➤ ಮೂವರು ಶಂಕಿತ ಯುವಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 11. ಉಳ್ಳಾಲ ಕುಂಪಲ ಆಶ್ರಯ ಕಾಲನಿ ನಿವಾಸಿ ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(17) ಮೃತದೇಹವು ಮನೆಯ ಕೋಣೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾದ ಹಿನ್ನೆಲೆ ಮೂವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ಸಂಬಂಧ ಮುಂಡೋಳಿ ನಿವಾಸಿ ಯತೀನ್ ರಾಜ್, ಆಶ್ರಯ ಕಾಲನಿ ನಿವಾಸಿಗಳಾದ ಸೌರಭ್ ಮತ್ತು ಸುಹಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯ ಮೃತದೇಹ ಪತ್ತೆಯಾಗುವ ಮುನ್ನ ಮೂವರು ಆಕೆಯ ಮನೆ ಎದುರುಗಡೆ ಸುತ್ತಾಡುವುದನ್ನು ಸ್ಥಳೀಯರು ಗಮನಿಸಿದ್ದು, ಕೊಲೆಶಂಕೆ ವ್ಯಕ್ತಪಡಿಸಿದ್ದರು. ಮಂಗಳೂರು ನಂತೂರು ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಈಕೆ ಬುಧವಾರ ರಜೆ ಪಡೆದುಕೊಂಡು ಮನೆಯಲ್ಲೇ ಉಳಿದಿದ್ದಳು. ತಾಯಿ ಮಧ್ಯಾಹ್ನ ವೇಳೆ ಊಟಕ್ಕೆಂದು ಮನೆಗೆ ಬಂದ ಸಂದರ್ಭ ಕೋಣೆಯೊಳಗೆ ಪ್ರೇಕ್ಷಾ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

Also Read  ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲೆ         ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್             

error: Content is protected !!
Scroll to Top