(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.12. ಕಬ್ಬಿಣದ ಪೈಪ್ ತುಂಬಿಸಿಕೊಂಡು ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದಲ್ಲಿರುವ ಬುಡೋಳಿ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಕಬ್ಬಿಣದ ಪೈಪ್ ಗಳನ್ನು ತುಂಬಿಕೊಂಡು ತೆರಳುತ್ತಿದ್ದ ಲಾರಿಯು ಬುಡೋಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿ ಬಿದ್ದಿದೆ. ಪರಿಣಾಮ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.