ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಕೋವ್ಯಾಕ್ಸಿನ್ ➤ 45 ವರ್ಷ ಮೇಲ್ಪಟ್ಟವರಿಗೆ ವಾರದಲ್ಲಿ 5 ದಿನ ಕೊರೋನಾ ಲಸಿಕೆ

(ನ್ಯೂಸ್ ಕಡಬ) newskadaba.com ಕಡಬ, ಮಾ.18. ದೇಶದೆಲ್ಲೆಡೆ ಸರಕಾರಿ ಆಸ್ಪತ್ರೆಗಳಲ್ಲಿ ಕೊರೋನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಅದರಂತೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲೂ ಗುರುವಾರ ಮತ್ತು ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ.

ವಾರದ ಐದು ದಿನಗಳಲ್ಲಿ ಬೆಳಿಗ್ಗೆ 10 ರಿಂದ ನಾಲ್ಕು ಗಂಟೆಯವರೆಗೆ 45 ವರ್ಷ ಮೇಲ್ಪಟ್ಟವರಿಗೆ ಸ್ವ-ಇಚ್ಛೆಯನುಸಾರ ಕೊರೋನಾ ಲಸಿಕೆ ನೀಡಲಾಗುತ್ತಿದ್ದು, ಆಧಾರ್ ಕಾರ್ಡ್ ಮತ್ತು ಯಾವುದಾದರೂ ಖಾಯಿಲೆಯಿದ್ದಲ್ಲಿ ಚಿಕಿತ್ಸೆಯ ವಿವರವುಳ್ಳ ಚೀಟಿಯನ್ನು ತರುವಂತೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಬಂಟ್ವಾಳ ತಾಲೂಕು ಪಂಚಾಯತ್ ➤ ಕೆ.ಡಿ.ಪಿ ಸಭೆ ಮುಂದೂಡಿಕೆ

 

 

error: Content is protected !!
Scroll to Top