ಉಳ್ಳಾಲ: ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ ➤ ವಿದ್ಯಾರ್ಥಿಗಳಿಂದ ಮಾನವ ಹಕ್ಕು ಆಯೋಗಕ್ಕೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ಶಿಕ್ಷಣದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸಿ, ಹಿಂದಿರುಗುತ್ತಿದ್ದ ವೇಳೆ ಗಾಂಜಾ ವ್ಯಸನಿಗಳಿಂದ ಹಲ್ಲೆಗೊಳಗಾಗಿ ನಂತರ ಉಳ್ಳಾಲ ಪೊಲೀಸರು ಠಾಣೆಗೆ ವಿದ್ಯಾರ್ಥಿಗಳನ್ನು ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿದ ಕುರಿತು ಹಲ್ಲೆಗೊಳಗಾದ ಮೂವರು ವಿದ್ಯಾರ್ಥಿಗಳು ಮಾನವ ಹಕ್ಕು ಆಯೋಗಕ್ಕೆ ದೂರನ್ನು ಸಲ್ಲಿಸಿದರು.

ದೂರು ಸ್ವೀಕರಿಸಿದ ಅಧಿಕಾರಿಗಳು ಪ್ರಕರಣವನ್ನು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

error: Content is protected !!
Scroll to Top