“ಝೀರೋ ಡ್ರಾಪ್ ಔಟ್” ಅಭಿಯಾನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ತಾಲೂಕು ಶಿಕ್ಷಣಾಧಿಕಾರಿಯ ಭೇಟಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 19. ಸಮಾಜದಲ್ಲಿ ಯಾರೂ ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ‘ಉತ್ತಮ ಭವಿಷ್ಯಕ್ಕಾಗಿ ಕಾರ್ಯ ಪ್ರವೃತ್ತರಾಗೋಣ’ ಎಂಬ ಘೋಷಾ ವಾಕ್ಯದೊಂದಿಗೆ “ಝೀರೋ ಡ್ರಾಪ್ ಔಟ್” ಎಂಬ ಅಭಿಯಾನವನ್ನು ರಾಜ್ಯದಾದ್ಯಂತ ಹಮ್ಮಿಕೊಂಡಿದೆ. ಈ ಅಭಿಯಾನದಲ್ಲಿ ಶಿಕ್ಷಣ ಇಲಾಖೆಯೊಂದಿಗೆ ಸಮಾಲೋಚನೆ, ವಿದ್ಯಾರ್ಥಿಗಳ ಸಮಾಲೋಚನೆ, ಜಾಗೃತಿ ಕಾರ್ಯಕ್ರಮ, ಪೋಷಕರ ಸಭೆ, ಹೆಲ್ಪ್ ಡೆಸ್ಕ್ ಮುಂತಾದ ಕಾರ್ಯಕ್ರಮಗಳು ನಡೆಯಲಿದ್ದು, ಇದರ ಭಾಗವಾಗಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ತಾಲೂಕು ಶಿಕ್ಷಣಾಧಿಕಾರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು.

ಕೊರೋನಾ ಲಾಕ್-ಡೌನ್ ನಂತರ ರಾಜ್ಯದಲ್ಲೇ ಸುಮಾರು ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಶಾಲಾ – ಕಾಲೇಜುಗಳಿಗೆ ಮರು ದಾಖಲಾತಿ ಆಗದೇ ಇದ್ದು ಶಾಲಾ ಕಾಲೇಜು ಅರ್ಧದಲ್ಲಿ ಮೊಟಕುಗೊಳಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬದಲಾಗಿ ಕುಟುಂಬ ನಿರ್ವಹಣೆ ಮಾಡಲು ಬೇಸಾಯ, ಕೂಲಿ, ಕಾರ್ಖಾನೆಗಳಿಗೆ ದುಡಿಮೆಗೆ ಹೋಗುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ಜಾಗೃತಿಯ ಬಗ್ಗೆ ಶಿಕ್ಷಣಾಧಿಕಾರಿಗಳ ಜೊತೆ ಚರ್ಚಿಸಲಾಯಿತು.

Also Read  ಹಿರಿಯ ವಿದ್ವಾಂಸ, ಖಾಝಿ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ನಿಧನಕ್ಕೆ ಟಿ.ಎಂ ಶಹೀದ್ ತೆಕ್ಕಿಲ್ ಸಂತಾಪ

ಈ ಸಂದರ್ಭದಲ್ಲಿ ಸಿಎಫ್ಐ ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಯಾಸೀನ್ ಬಂಗೇರಕಟ್ಟೆ, ಕಾರ್ಯದರ್ಶಿ ಶಹೀರ್ ಪಾಂಡವರಕಲ್ಲು, ಜೊತೆ ಕಾರ್ಯದರ್ಶಿ ಆರಿಫ್ ಲಾಯಿಲ, ಕೋಶಾಧಿಕಾರಿ ಝಾಹೀದ್  ಸುನ್ನತ್ ಕೆರೆ, ಹಾಗೂ ಜಿಲ್ಲಾ ನಾಯಕರಾದ ಸಿರಾಜ್ ಹಾಗೂ ಮೊಯಿನುದ್ದೀನ್ ಉಪಸ್ಥಿತರಿದ್ದರು.

error: Content is protected !!
Scroll to Top