ಉಪ್ಪಿನಂಗಡಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ➤ ಮೂವರು ಗಂಭೀರ | ರಸ್ತೆ ಬದಿಯಲ್ಲಿ ಬಿದ್ದಿದ್ದ ಕಾಲುಗಳು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.20. ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಕಾಂಚನ ಎಂಬಲ್ಲಿ ಶನಿವಾರದಂದು ಸಂಭವಿಸಿದೆ.

ಹ್ಯುಂಡೈ ಐ20 ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕಿಗೆ ಕಾಂಚನ ಕ್ರಾಸ್ ಬಳಿಯ ಸಣ್ಣಂಪಾಡಿ ಎಂಬಲ್ಲಿ ಢಿಕ್ಕಿ ಹೊಡೆದಿದ್ದು, ಬೈಕಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸವಾರರ ಕಾಲು ತುಂಡು ತುಂಡಾಗಿ ರಸ್ತೆ ಪಕ್ಕದಲ್ಲಿ ಬಿದ್ದಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಮಡಂತ್ಯಾರು ಮೂಲದವರೆಂದು ತಿಳಿದುಬಂದಿದ್ದು, ಹೆಚ್ಚಿನ ವಿವರ ಇನ್ನಷ್ಟೇ ಸಿಗಬೇಕಿದೆ.

Also Read  ಕಡಬದಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ - ಆತಂಕದಲ್ಲಿ ಜನತೆ

 

 

error: Content is protected !!
Scroll to Top