ಬಂಟ್ವಾಳ: ಜ್ಯೋತಿಷಿಗೆ ಚೂರಿಯಿಂದ ಇರಿದು ದುಷ್ಕರ್ಮಿಗಳು ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 20. ಜ್ಯೋತಿಷಿಯೋರ್ವರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಿ.ಸಿ ರೋಡಿನಲ್ಲಿ ನಡೆದಿದೆ.

ಚೂರಿ ಇರಿತಕ್ಕೊಳಗಾದವರನ್ನು ಪಂಡಿತ್ ಲಕ್ಷ್ಮೀಕಾಂತ್ ಭಟ್ ಎಂದು ಗುರುತಿಸಲಾಗಿದೆ. ಜ್ಯೋತಿಷಿಯ ಬಳಿ ಬಂದ ಇಬ್ಬರು ವ್ಯಕ್ತಿಗಳು ಯಾವುದೋ ದ್ವೇಷದಿಂದಾಗಿ ಚೂರಿಯಿಂದ ಇರಿದು ಬಾಗಿಲು ಹಾಕಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಮೂರ್ಛೆ ಹೋಗಿದ್ದ ಪಂಡಿತ್ ಅವರು ಸ್ವಲ್ಪ ಸಮಯದ ನಂತರ ಎಚ್ಚರಗೊಂಡು, ಬಳಿಕ ಅವರೇ ಎದ್ದು ಕೋಣೆಯಿಂದ ಹೊರಬಂದಿದ್ದಾರೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಪಂಡಿತ್ ಅವರನ್ನು ಕಂಡ ಪಕ್ಕದ ಕೋಣೆಯವರು ತಕ್ಷಣ ಸಮೀಪದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ತಾಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರು ಸ್ವೀಕಾರ

error: Content is protected !!
Scroll to Top