(ನ್ಯೂಸ್ ಕಡಬ) newskadaba.com ಹಾಸನ, ಮಾ.21. ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದಾತನಿಗೆ ಯುವತಿಯೋರ್ವಳು ಸಾರ್ವಜನಿಕವಾಗಿ ಹೊಡೆದಿರುವ ಘಟನೆ ಹಾಸನದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬೇಲೂರಿನಿಂದ ಹಾಸಕ್ಕೆ ತೆರಳುತ್ತಿದ್ದ ಬಸ್ ಹತ್ತಿದ್ದ ವ್ಯಕ್ರಿಯೋರ್ವ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಬಸ್ ಹಾಸನ ನಿಲ್ದಾಣ ತಲುಪುತ್ತಿದ್ದಂತೆ ಯುವತಿಯು ವ್ಯಕ್ತಿಯ ಮೇಲೆ ಮುಗಿಬಿದ್ದಿದ್ದು, ಸಾರ್ವಜನಿಕವಾಗಿ ಚೆನ್ನಾಗಿ ಬಾರಿಸಿದ್ದಾಳೆ. ಬಳಿಕ ಸ್ಥಳದಲ್ಲಿದ್ದ ಸಾರಿಗೆ ಇಲಾಖೆಯ ಅಧಿಕಾರಿಗಳು ಆರೋಪಿಯನ್ನು ಹಿಡಿದು ಹಾಸನ ಪೊಲೀಸರಿಗೆ ಒಪ್ಪಿಸಿದ್ದಾರೆ.
Also Read Big Breaking: ಚಿತ್ರನಟ ಪುನೀತ್ ರಾಜ್‍ಕುಮಾರ್ ವಿಧಿವಶ ➤ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಮೃತ್ಯು