ಪಂಪ್‌ವೆಲ್ ಫ್ಲೈಓವರ್ ನಲ್ಲಿ ಉರುಳಿದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.21. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಭಾನುವಾರ ಸಂಜೆ ಪಂಪ್‌ವೆಲ್ ಮೇಲ್ಸೇತುವೆಯಲ್ಲಿ ನಡೆದಿದೆ.

ನಂತೂರು ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಪಂಪ್‌ವೆಲ್ ಮೇಲ್ಸೇತುವೆಯಲ್ಲಿ ಪಲ್ಟಿಯಾಗಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

 

error: Content is protected !!

Join the Group

Join WhatsApp Group